ಅಬಕಾರಿ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

#Priyank Kharge  #Excise officers # Illegal alcohol

12-09-2018

ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಅಬಕಾರಿ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಕಿರಾಣಿ ಅಂಗಡಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದೆ, ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದರೂ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಅಕ್ರಮ ಮದ್ಯದ ಅಂಗಡಿ ಮುಚ್ಚಲಾಗುವುದಿಲ್ಲ ಎನ್ನೋದಾದ್ರೆ ಬರೆದುಕೊಟ್ಟು ಬಿಡಿ, ಮನ ಬಂದಂತೆ ಮದ್ಯದ ಅಂಗಡಿಗಳ ಸ್ಥಳಾಂತರವೂ ನಡೆದಿದೆ. ಮತ್ತೊಮ್ಮೆ ಅನಧಿಕೃತವಾಗಿ ಮದ್ಯದ ಅಂಗಡಿ ಸ್ಥಳಾಂತರಗೊಂಡರೆ ನಿಮ್ಮ ಇಲಾಖೆಯನ್ನೇ ಮುಚ್ಚಿಸಿ ಬಿಡುತ್ತೇನೆ’ ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Priyank Kharge Excise ಅಂಗಡಿ ಮಾರಾಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ