ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಚಿರತೆ ಬಲಿ !

Kannada News

02-06-2017

ಮೈಸೂರು:-ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ  ಬೆಟ್ಟದಪುರದಲ್ಲಿ ನಡೆದಿದೆ. ಉರುಳಿಗೆ ಸಿಲುಕಿ ಸಾವನ್ನಪ್ಪಿರುವ 2 ವರ್ಷದ ಗಂಡು ಚಿರತೆ. ಹಂದಿ ಬೇಟೆಗಾಗಿ ಹಾಕಿದ್ದ ಉರುಳುಗಳಲ್ಲಿ ಸಿಲುಕಿ ಸಾವನ್ನಪ್ಪಿದೆ. ಶಿವಣ್ಣ ಎಂಬುವರ ಜಮೀನಿನಲ್ಲಿ ಚಿರತೆಯ ಶವ ಪತ್ತೆ ಯಾಗಿದೆ . ಸ್ಥಳಕ್ಕೆ ಎಸಿಎಫ್ ಸೋಮಪ್ಪ, ಆರ್.ಎಫ್.ಒ ಗಿರೀಶ್ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಹೆಚ್ಚಿನ ಮಾಹಿತಿ ಪಡೆಯಲಿದ್ದೇವೆ ಎಂದು ತಿಳಿಸಿದರು.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ