ಪೊಲೀಸರ ಮೇಲೆ ಜಿ.ಪಂ.ಮಾಜಿ ಅಧ್ಯಕ್ಷನ ಬೆಂಬಲಿಗರಿಂದ ಹಲ್ಲೆ!

#Zilla panchayath # Assaulted

12-09-2018

ಕೋಲಾರ: ರಸ್ತೆಯಲ್ಲಿ ಅಡ್ಡಲಾಗಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಂ.ಶ್ರೀನಿವಾಸನ್ ಎಂಬುವವರ ಬೆಂಬಲಿಗರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಶ್ರೀನಿವಾಸಪುರ ಪಟ್ಟಣದ ಬಸ್ ಸ್ಟಾಂಡ್ ಬಳಿ ಗೌರಿ ಹಬ್ಬದ ವ್ಯಾಪಾರ ಜೋರಾಗಿದ್ದರಿಂದ ಶ್ರೀನಿವಾಸ್ ತಮ್ಮ ಕಾರನ್ನ ರಸ್ತೆಯಲ್ಲಿ ಅಡ್ಡಲಾಗಿ ನಿಲ್ಲಿಸಿದ್ದರು. ರಸ್ತೆಯಲ್ಲಿ ಟ್ರಾಫಿಕ್ ಹೆಚ್ಚಾಗಿದ್ದರಿಂದ ಪೊಲೀಸರು ಕಾರನ್ನು ಪಕ್ಕಕ್ಕೆ ತೆಗೆಯುವಂತೆ ಸೂಚಿಸಿದ್ದರು. ಆದರೆ, ಇದರಿಂದ ಕೋಪಗೊಂಡ ಶ್ರೀನಿವಾಸ್, ಕಾರನ್ನು ತೆಗೆಯದೆ ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದರು. ಶ್ರೀನಿವಾಸ್ ಹಲ್ಲೆಗೆ ಮುಂದಾಗುತ್ತಿದ್ದಂತೆ ಅವರ ಬೆಂಬಲಿಗರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.

ನಂತರ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಕಾರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಪರಮಾಪ್ತ ಅನ್ನೋ ಕಾರಣಕ್ಕೆ ತಾಲ್ಲೂಕಿನಲ್ಲಿ ಶ್ರೀನಿವಾಸ್ ಅವರ ಗೂಂಡಾ ವರ್ತನೆ ಹೆಚ್ಚಾಗಿದೆ ಎಂಬ ಮಾತುಗಳೂ ಕೇಳಿ ಬಂದಿವೆ.


ಸಂಬಂಧಿತ ಟ್ಯಾಗ್ಗಳು

Police Zilla panchayat ಪರಮಾಪ್ತ ಅವಾಚ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ