ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ: ಲಾಠಿ ಚಾರ್ಜ್

#ganesha  #procession

14-09-2018

ಹುಬ್ಬಳ್ಳಿ: ಕ್ಷುಲಕ ಕಾರಣಕ್ಕೆ ಯುವಕರ ಎರಡು ಗುಂಪುಗಳ ನಡುವೆ ಮಾತಿನ ‌ಚಕಮಕಿ ನಡೆದಿದ್ದು, ಸ್ವಲ್ಪ ಸಮಯದ ನಂತರ ಮತ್ತೆ ಜಗಳಕ್ಕಿಳಿದ ಯುವಕರ ಮೇಲೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯು ಹುಬ್ಬಳ್ಳಿಯ ಸಿಟಿ ಕ್ಲಿನಿಕ್ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಗಣೇಶ ಪ್ರತಿಷ್ಠಾನೆ ಸಲುವಾಗಿ ಡಿ.ಜೆ ಹಾಕಿಕೊಂಡು ಭಾರೀ ಮೆರವಣಿಗೆ ಮಾಡಲಾಗುತಿತ್ತು.‌ ಈ ವೇಳೆ ಒಬ್ಬ ಯುವಕ ಇನ್ನೊಬ್ಬ ಯುವಕನಿಗೆ ಕಾಲು ತಾಗಿದೆ.‌ ಇದೇ ನೆಪದಿಂದ ಕಾಲು ತಾಗಿದ ಯುವಕನ ಸ್ನೇಹಿತರು ಕಾಲು ತಾಗಿಸಿದ ಯುವಕನ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಆಗ ಇಬ್ಬರೂ ಯುವಕರ ಕಡೆಯವರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು ಗಲಾಟೆ ಉಂಟಾಗಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಲಘು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

procession ganesha ಸ್ನೇಹಿತರು ಗಲಾಟೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ