ಜೂನ್ 12ಕ್ಕೆ ಕರ್ನಾಟಕ ಬಂದ್ ಗೆ ಕರೆ !

Kannada News

02-06-2017

ಮೈಸೂರು:- ಬಯಲು ಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಯೋಜನೆ ಅನುಷ್ಠಾನ ಮತ್ತು ಕಳಸಾ ಬಂಡೂರಿ, ಮಹದಾಯಿ ಯೋಜನೆ ಹಾಗೂ ಮೇಕೆದಾಟು ಯೋಜನೆ ಅನುಷ್ಠಾನ ಸೇರಿದಂತೆ ಕನ್ನಡಿಗರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂನ್ 12ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಹೇಳಿದ್ದಾರೆ. ಬಂದ್ ಗೆ ಬೆಂಬಲ ನೀಡುವಂತೆ ಮೈಸೂರಿನ ಜನರಲ್ಲಿ ಮನವಿ ಮಾಡಿದ ಅವರು ಮೈಸೂರಿನ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಪ್ರಯಾಣಿಕರಿಂದಲೂ ಕರ್ನಾಟಕ ಬಂದ್ ಗೆ ಬೆಂಬಲ ಕೋರಿದರು.

 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ