ಭೀಕರ ಸರಣಿ ಅಪಘಾತ: ಇಬ್ಬರ ದುರ್ಮರಣ

#Chain accident #Death

14-09-2018

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊರ್ವನಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೇ ಮದ್ರಾಸ್ ರಸ್ತೆಯ ಕಾಟಂನಲ್ಲೂರು ಗೇಟ್ ಬಳಿ ಕಾರು, ಬೈಕ್ ಮತ್ತು  ಲಾರಿಗಳ ನಡುವೆ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಕೆ.ಆರ್.ಪುರಂ ಕಡೆಯಿಂದ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ನಂತರ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಅಮರನಾಥ್ ಸಿಂಗ್ ಮತ್ತು ಶುಬೇದ್ ಬೇಜ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಸ್ವಂತ್ ಸಿಂಗ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident Hoskote ಮದ್ರಾಸ್ ಸ್ಥಳೀಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ