ಕೊಡಗು ಪ್ರವಾಹ: ಇಂದು ಕೇಂದ್ರ ಅಧ್ಯಯನ ತಂಡ-ಸಿಎಂ ಭೇಟಿ

#Kodagu Flood # central study team # Cm Kumaraswamy

14-09-2018

ಬೆಂಗಳೂರು: ಕೊಡಗಿನಲ್ಲಿ ಸಂಭವಿಸಿದ ಭಾರೀ ಪ್ರವಾಹ, ಅದರಿಂದ ಉಂಟಾದ ನಷ್ಟ, ಪ್ರವಾಹದ ಭೀಕರತೆಯನ್ನು ಅಧ್ಯಯನ ನಡೆಸಿರುವ ಕೇಂದ್ರ ಸರ್ಕಾರದ ಅಧ್ಯಯನ ತಂಡ ಇಂದು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದೆ. ನೆರೆ ಹಾವಳಿಯಿಂದ ಮೂರು ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಕೇಂದ್ರಕ್ಕೆ ಮನವಿ ಮಾಡಲಾಗಿತ್ತು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಕೊಡಗಿಗೆ ಅಧ್ಯಯನ ತಂಡವನ್ನು ಕಳಿಸುವಂತೆ ಮನವಿ ಮಾಡಿದ್ದರು. ಮನವಿ ಮೇರೆಗೆ ಎರಡು ದಿನಗಳ ಕಾಲ ಕೊಡಗಿನಲ್ಲಿ ಪರಿಸ್ಥಿತಿ ಅವಲೋಕಿಸಿದ ಕೇಂದ್ರ ತಂಡ, ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಲಿದೆ. ನಂತರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಈ ವೇಳೆ ಕೇಂದ್ರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಸಿಎಂ ಮನವಿ ಮಾಡಲಿದ್ದಾರೆ ಎಂದು ತಿಳಿದಿ ಬಂದಿದೆ.


ಸಂಬಂಧಿತ ಟ್ಯಾಗ್ಗಳು

Cm Kumaraswamy Study Team ಸಂದರ್ಭ ಕೇಂದ್ರ ಸರ್ಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ