ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ‘ಕೈ’ ನಾಯಕರ ಒತ್ತಡ!

#Cabinet expansion # H.D.Kumaraswamy # High command

14-09-2018 225

ಬೆಂಗಳೂರು: ರಾಜ್ಯ ಸಚಿವ ಸಂಪುಟ ಶೀಘ್ರವಾಗಿ ವಿಸ್ತರಿಸಲು ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ನಿರ್ಧಾರಂತೆ ಈ ತಿಂಗಳ ಮೂರನೇ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯ ಕೈ ನಾಯಕರು ಒತ್ತಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಂಪುಟ ವಿಸ್ತರಣೆ ಮುಂದೂಡಿದರೆ ಮತ್ತೆ ಗೊಂದಲಗಳು ಉದ್ಭವಿಸುವ, ಭಿನ್ನಮತ ಸ್ಫೋಟವಾಗುವ ಸಾಧ್ಯತೆಗಳಿದ್ದು, ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡುವ ಒತ್ತಡ ಸರ್ಕಾರದ ಮೇಲಿದೆ. ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಬೇಸರಗೊಂಡಿರುವ ಹಿರಿಯ ಕಾಂಗ್ರೆಸ್ ಶಾಸಕರ ಅಸಮಾಧಾನ ಸ್ಫೋಟವಾಗುವ ಸಾಧ್ಯತೆಗಳು ದಟ್ಟವಾಗೇ ಇದ್ದು, ಭಿನ್ನಮತ ಸ್ಫೋಟವಾಗುವ ಮೊದಲೇ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಡಲು ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

Congress cabinet expansion ಸಚಿವ ಸಂಪುಟ ವಿಸ್ತರಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ