ಬಿಸಿ ಊಟ ಯೋಜನೆ: ಸಿಕ್ಕಿಬಿದ್ದ ಖದೀಮರು

#Govt school #bisi oota # food

14-09-2018

ಹಾವೇರಿ: ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ಯೋಜನೆಯೂ ಒಂದು. ಸಮ್ಮಿಶ್ರ ಸರ್ಕಾರದಲ್ಲೂ ಬಿಸಿ ಊಟ ಯೋಜನೆ ಮುಂದುವರೆದಿದ್ದು, ಬಿಸಿ ಊಟ ತಯಾರಕರು ಸರ್ಕಾರದ ಅಕ್ಕಿಗೆ ಕನ್ನ ಹಾಕಿ ಸಿಕ್ಕಿಬಿದ್ದಿದ್ದಾರೆ.

ಹಾವೇರಿಯ ಎಂ.ಜಿ.ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟ ಯೋಜನೆಯ ಸಾಮಗ್ರಿಗಳನ್ನು ದುರುಪಯೋಗ ಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಅಕ್ಕಿ, ಬೇಳೆ ಸೇರಿದಂತೆ ವಿವಿಧ ಧಾನ್ಯಗಳನ್ನು ಮನೆಗೆ ಕೊಂಡೊಯ್ಯುವಾಗ ಖದೀಮರು ಸಿಕ್ಕಿಬಿದ್ದಿದ್ದಾರೆ. ಬಿಸಿ ಊಟ ತಯಾರಕರು ದಿನ ನಿತ್ಯ ತಮ್ಮ ಸಂಬಂಧಿಕರ ಕೈಯಲ್ಲಿ ಆಹಾರ ಪದಾರ್ಥಗಳನ್ನು ಮನೆಗೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಈ ಹಿಂದೆಯೂ ಸಿಕ್ಕಿಬಿದ್ದಿದ್ದು ಹಲವು ಬಾರಿ ಗ್ರಾಮಸ್ಥರು ಕರೆಸಿ ಬುದ್ಧಿವಾದ ಹೇಳಿದರೂ ಕ್ಯಾರೆ ಅನ್ನದ ಸಿಬ್ಬಂದಿ ಎಂದಿನಂತೆ ತಮ್ಮ ಕಾರ್ಯ ಮುಂದುವರೆಸಿದ್ದರು.

ಇಂದು ಕೂಡ ಅಕ್ಕಿ, ಬೇಳೆ ಸೇರಿದಂತೆ ಇತರೆ ವಸ್ತುಗಳನ್ನು ತೆಗೆದುಕೊಂಡು ಹೋಗುವಾಗ ಹಿಡಿದುಕೊಂಡ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆ ಸಂಬಂಧ ಶಾಲಾ ಆಡಳಿತ ಮಂಡಳಿ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಇವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

bisi oota Govt school ಗ್ರಾಮಸ್ಥರು ಬುದ್ಧಿವಾದ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ