ವದಂತಿಗಳಿಗೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ಪಷ್ಟನೆ

#Rumors #M.P.Kumaraswamy #JDS # Mudigere

14-09-2018

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳು ಕೇಳಿ ಬಂದ ಬೆನ್ನಲ್ಲೇ, ಬಿಜೆಪಿ‌ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಡಾಲರ್ಸ್ ಕಾಲನಿಯ ನಿವಾಸಕ್ಕೆ ದೌಡಾಯಿಸಿ‌ದ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಎಸ್ವೈರನ್ನು ಭೇಟಿ ಮಾಡಿದ್ದಾರೆ.

ಭೇಟಿ ಬಳಿಕ ಮಾತನಾಡಿದ ಶಾಸಕ ಎಂಪಿ.ಕುಮಾರಸ್ವಾಮಿ, ‘ತಾನು ಜೆಡಿಎಸ್ ಗೆ ಹೋಗುತ್ತಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ, ಇದನ್ನೇ ಯಡಿಯೂರಪ್ಪ ಸಹ ಕೇಳಿದ್ದಾರೆ. ತಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡಲ್ಲ, ಪಕ್ಷ ಬಿಡಲ್ಲ' ಎಂದು ಖಡಕ್ಕಾಗಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ ರಚನೆ ಮಾಡುವ ಬಗ್ಗೆ ತನಗೇನೂ ಗೊತ್ತಿಲ್ಲ ಎಂದ ಅವರು, ಬಿಜೆಪಿ ಸರ್ಕಾರ ಬಂದರೆ ಆಗ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡಬಹುದು, ಮೊದಲು ಸರ್ಕಾರ ರಚನೆಯಾಗಲಿ ಎಂದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ