ಮೈಸೂರು ದಸರಾ ಪೋಸ್ಟರ್ ಬಿಡುಗಡೆ

Mysore dasara-2018 poster released

14-09-2018

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿಂದು 2018ರ ದಸರಾ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಚಿವರಾದ ಸಾರಾ ಮಹೇಶ್, ಸಿ.ಪುಟ್ಟರಂಗಶೆಟ್ಟಿ ಹಾಗೂ ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್ ಪೋಸ್ಟರ್ ಬಿಡುಗಡೆ ಮಾಡಿದರು. ಈ ಮಧ್ಯೆ ದಸರಾ ಗಜಪಡೆ ಈಗಾಗಲೇ ತಯಾರಿ ಆರಂಭಿಸಿದ್ದು, ಅಂಬಾರಿ ಹೊರಲಿರುವ ಅರ್ಜುನನಿಗೆ ಭಾರ ಹೊರುವ ತಾಲೀಮು ನಡೆಸಲಾಯಿತು. 300 ಕೆಜಿ ತೂಕದ ಮರಳು ಮೂಟೆ ಹೊರಿಸಿ ತಾಲೀಮು ಕೈಗೊಳ್ಳಲಾಯಿತು.


ಸಂಬಂಧಿತ ಟ್ಯಾಗ್ಗಳು

dasara poster 2018 GT Devegowda ತಾಲೀಮು ಉಸ್ತುವಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ