ಖಾಸಗಿ ಕಂಪೆನಿ ಉದ್ಯೋಗಿಯೊಬ್ಬರ ಬರ್ಬರ ಹತ್ಯೆ

#Murder  #Horrific  #Id card

15-09-2018

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ದೊಡ್ಡದೇನಹಳ್ಳಿ ಗ್ರಾಮದಲ್ಲಿ ಖಾಸಗಿ ಕಂಪೆನಿಯ ಉದ್ಯೋಗಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮುಖ ಗುರುತು ಸಿಗದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ, ಬೆಂಕಿ ಹಚ್ಚಿದ್ದಾರೆ. ದೊಡ್ಡದೇನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಸುಟ್ಟ ಅವಸ್ಥೆಯಲ್ಲಿರುವ ಮೃತ ದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ದೇಹದ ಬಳಿ ಚೇತನ್ ಎಂಬ ಹೆಸರು ಇರುವ ಐಡಿ ಕಾರ್ಡ್ ಕಂಡುಬಂದಿದೆ. ಹೆಬ್ಬಾಳದ ಬಳಿಯ ಖಾಸಗಿ ಕಂಪೆನಿಯೊಂದರ ಐಡಿ ಕಾರ್ಡ್ ಎಂದು ತಿಳಿದು ಬಂದಿದ್ದು, ಮೃತ ದೇಹದ ಬಳಿ ಸಿಕ್ಕ ಐಡಿ ಕಾರ್ಡ್ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತನ ಗುರುತಿಗೆ ಪರೀಶೀಲನೆ ನಡೆಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Murder Horrific ಐಡಿ ಕಾರ್ಡ್ ನಿರ್ಜನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ