ಕಪ್ಪು ಬಾವುಟ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರೊಟೆಸ್ಟ್

#petrol-diesel #protest

15-09-2018

ಬೆಂಗಳುರು: ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಪ್ರತಿಭಟನೆ ನಡೆಸಿದೆ. ನಗರದ ಕೋರ್ಟ್ ಎದುರಿನ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ವೇದಿಕೆ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಕಪ್ಪು ಬಾವುಟ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೋದಿ ಸರ್ಕಾರ ವಿರುದ್ಧ ವಿವಿಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೂಡಲೇ ತೈಲ ಬೆಲೆ ಕಡಿಮೆ ಮಾಡುವಂತೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

petrol-diesel Modi ಕೋರ್ಟ್ ಪ್ರತಿಭಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ