ಗೌರಿ ಹತ್ಯೆ: ಎಸ್ಐಟಿ ವಶಕ್ಕೆ ಮಹಾರಾಷ್ಟ್ರದ ಮಾಜಿ ಕಾರ್ಪೋರೇಟರ್

#Gauri Lankesh #srikanth pangarkar #Dabholkar

17-09-2018

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನದ ಮೇರೆಗೆ ಮಹಾರಾಷ್ಟ್ರದ ಮಾಜಿ ಕಾರ್ಪೋರೇಟರ್ ಶ್ರೀಕಾಂತ್ ಪನ್ಗಾರ್ಕರ್ ನನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ)ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಗೌರಿ ಹತ್ಯೆಗೆ ಸಹಾಯ ಮಾಡಿದ್ದಾರೆ ಎಂಬ ಶಂಕೆ ಮೇರೆಗೆ ಮಾಹಿತಿ ಆಧರಿಸಿ ಮಹಾರಾಷ್ಟ್ರದ ಮಾಜಿ ಕಾರ್ಪೋರೇಟರ್ ಶ್ರೀಕಾಂತ್ ಪನ್ಗಾರ್ಕರ್ ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ಎಸ್‍ಐಟಿ ಅಧಿಕಾರಿಗಳು ತಿಳಿಸಿದ್ದಾರೆ

ಶ್ರೀಕಾಂತ್ ಪನ್ಗಾರ್ಕರ್, ಚಿಂತಕ ದಾಬೋಲ್ಕರ್ ಹತ್ಯೆಯ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದ ಮೇರೆಗೆ ಅಲ್ಲಿನ ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು, ಅವರಿಂದ ವಶಕ್ಕೆ ತೆಗೆದುಕೊಂಡಿರುವ ಶ್ರೀಕಾಂತ್‍ನನ್ನು ರಾಜ್ಯದ ಎಸ್‍ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ವಿಚಾರವಾದಿಗಳು, ಚಿಂತಕರ ಹತ್ಯೆಗೆ ಹಣಕಾಸು ಸಹಾಯ ಮಾಡಿದ್ದ ಅನ್ನೋದು ಎಟಿಎಸ್ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಗೌರಿ ಹಂತಕರಿಗೆ ಸಹಾಯ ಮಾಡಿರುವ ಶಂಕೆ ಮೇರೆಗೆ ಮುಂಬೈ ಜೈಲಿನಿಂದ ಮಾಜಿ ಕಾರ್ಪೋರೇಟರ್ ಅವರನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿಗೆ ಕರೆ ತಂದು ವಿಚಾರಣೆ ನಡೆಸಿ ಕೋರ್ಟ್‍ಗೆ ಹಾಜರುಪಡಿಸಿ ಮತ್ತೆ ತಮ್ಮ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಸಂಬಂಧಿತ ಟ್ಯಾಗ್ಗಳು

Gauri Lankesh srikanth pangarkar ಚಿಂತಕ ಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ