ದಾವಣಗೆರೆ ಬರಪೀಡಿತ ಎಂದು ಘೋಷಿಸಲು ರೈತರ ಒತ್ತಾಯ

#Drought #Farmers #Davanagere

17-09-2018

ದಾವಣಗೆರೆ: ಬರ ಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ದಾವಣಗೆರೆಯನ್ನೂ ಸೇರಿಸಿ ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತರು ಪ್ರತಿಭಟನೆ ನಡೆಸಿಸಿದ್ದಾರೆ. ನಗರದ ಜಯದೇವ ಸರ್ಕಲ್ ನಿಂದ ತಾಲ್ಲೂಕು ಕಚೇರಿವರೆಗೆ ಒಣಗಿದ ಮೆಕ್ಕೆಜೋಳ ಬೆಳೆ ಹಿಡಿದು ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ಬರ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Drought Farmers ಪರಿಹಾರ ರೈತ ಸಂಘ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ