'ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ 600 ಕೋಟಿ ಬಿಡುಗಡೆ'

#G.T.Devegowda #School and colleges #

17-09-2018

ಮೈಸೂರು: ರಾಜ್ಯದಲ್ಲಿ ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಸರ್ಕಾರ 600 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಾಲಮಿತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ ಉಸ್ತುವಾರಿ ಕುಲಪತಿಗಳು ಇರುವ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಖಾಯಂ ಕುಲಪತಿಗಳನ್ನು ಶೀಘ್ರದಲ್ಲೇ ನೇಮಿಸಲಾಗುವುದು ಎಂದು ಸಚಿವರು ತಿಳಿಸಿದರು. ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಕಾಲೇಜುಗಳನ್ನು ಅಭಿವೃದ್ಧಿಪಡಿಸುವುದು ತಮ್ಮ ಗುರಿಯಾಗಿದೆ ಎಂದ ಜಿ.ಟಿ.ದೇವೇಗೌಡ, ಈ ಕಾಲೇಜುಗಳ ಅಭಿವೃದ್ಧಿಗೆ ಯಾವುದೇ ಹಣ ನೀಡಿಲ್ಲ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ