'ಮುಖ್ಯಮಂತ್ರಿಗಳ ಗಮನ ಸೆಳೆಯಲು ವಿಧಾನಸೌಧ ಮುತ್ತಿಗೆ'

#Sugarcane  #Farmers #kuruburu shanthakumar

18-09-2018

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತೆ ಬೀದಿಗಿಳಿಯಲಿರುವ ಕಬ್ಬು ಬೆಳೆಗಾರರು ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಹಾಗು ವಿಧಾನಸೌಧ ಮುತ್ತಿಗೆಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರಾಜ್ಯ ಕಬ್ಬು ಬೆಳೆಗಾರರ ಸಂಘಟನೆಯಿಂದ ಪ್ರತಿಭಟನೆ ನಡೆಸಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಕಬ್ಬು ಬೆಳೆಗಾರರು ಸಾಂಕೇತಿಕ ಮುಷ್ಕರ ನಡೆಸಲಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ನಗರದ ಸಂಗೊಳ್ಳಿರಾಯಣ್ಣ ರೈಲೈ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೂ ಐನೂರಕ್ಕೂ ಹೆಚ್ಚು ರೈತರು ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿಧಾನಸೌಧ ಮುತ್ತಿಗೆಗೂ ಚಿಂತನೆ ನಡೆಸಿದ್ದು, ಮುಖ್ಯಮಂತ್ರಿಗಳ ಗಮನ ಸೆಳೆಯಲು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ