ಮೈಸೂರು ಸ್ಟ್ರೀಟ್ ಫೆಸ್ಟಿವಲ್ ಸ್ಥಳಾಂತರ!

#Mysore #Dasara #street festival #District administration

18-09-2018

ಮೈಸೂರು: ದಸರಾ ಮಹೋತ್ಸವ ಹಿನ್ನೆಲೆ, ಈ ಬಾರಿಯ ಓಪನ್ ಸ್ಟ್ರೀಟ್ ಫೆಸ್ಟಿವಲ್ ಸ್ಥಳ ಬದಲಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಕೋರ್ಟ್ ರಸ್ತೆಗೆ ಓಪನ್ ಸ್ಟ್ರೀಟ್ ಫೆಸ್ಟಿವಲ್ ಶಿಫ್ಟ್ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ಧನ್ ಅವರು ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷ ದೇವರಾಜ ಅರಸು ರಸ್ತೆಯಲ್ಲಿ ಓಪನ್ ಸ್ಟ್ರೀಟ್ ಫೆಸ್ಟಿವಲ್ ನಡೆಯುತ್ತಿತ್ತು. ಆದರೆ ಇಲ್ಲಿ ವಾಹನಗಳ ಪಾರ್ಕಿಂಗ್, ಟ್ರಾಫಿಕ್ ಸಮಸ್ಯೆ ಹಿನ್ನೆಲೆ ಸ್ಥಳ ಬದಲಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಈ ಬಾರಿ ಸುಮಾರು 1200 ಮೀಟರ್ ಉದ್ದದ ರಸ್ತೆಯಲ್ಲಿ ಓಪನ್ ಸ್ಟ್ರೀಟ್ ಫೆಸ್ಟಿವಲ್ ನಡೆಯಲಿದ್ದು, ಮಹಾರಾಜ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ಗೆ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆದಿದೆ. ಜಿಲ್ಲಾಧಿಕಾರಿಯಾಗಿದ್ದ ಡಿ.ರಂದೀಪ್ ಅವರು ಈ ಓಪನ್ ಸ್ಟ್ರೀಟ್ ಫೆಸ್ಟಿವಲ್ ಆರಂಭಿಸಿದ್ದರು. ಈ ಕಾರ್ಯಕ್ರಮ ಸಾಕಷ್ಟು ಜನಮನ್ನಣೆ ಗಳಿಸಿದ್ದ ಹಿನ್ನೆಲೆ ಮುಂದುವರೆಸಿಕೊಂಡು ಬಂದಿದ್ದು, ಈ ಬಾರಿ ಜಾಗ ಬದಲಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ