ವಿಧಾನಸೌಧಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ

#Delhi #Rajnath Singh #Home minister

18-09-2018 250

ಬೆಂಗಳೂರು: 28ನೇ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ.  ಮಧ್ಯಾಹ್ನ ವಿಧಾನಸೌಧದಲ್ಲಿ ನಡೆಯಲಿರುವ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ  ಭಾರತದ ಎಲ್ಲ ರಾಜ್ಯಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಅಂಡಮಾನ್ ನಿಕೋಬಾರ್ ಲೆಫ್ಟಿನೆಂಟ್ ಗವರ್ನರ್ ಗಳು, ಪುದುಚೇರಿ ಸಿಎಂ, ತಮಿಳುನಾಡು ಸಿಎಂ ಕೂಡ ಭಾಗಿಯಾಗು ಸಾಧ್ಯತೆಗಳಿವೆ. ಕೇರಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಹಣಕಾಸು ಸಚಿವರೂ ಬರಲಿದ್ದಾರೆ. ಸಭೆ ಬಳಿಕ  ಗೃಹ ಸಚಿವ ರಾಜನಾಥ್ ಸಿಂಗ್ ದೆಹಲಿಗೆ ವಾಪಸ್ ತೆರಳಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜೊತೆ ರಾಜನಾಥ್ ಸಿಂಗ್ ಅವರ ಯಾವುದೇ ಸಭೆ, ಭೇಟಿ ನಿಗದಿಯಾಗಿಲ್ಲ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

Rajnath Singh Delhi ವಿಧಾನಸೌಧ ತೆಲಂಗಾಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ