ಹೆಂಡತಿ ಭೀಕರ ಕೊಲೆ: ಗಂಡ ನೇಣಿಗೆ ಶರಣು

#Suicide  #Murder #Husband #Wife

18-09-2018

ಮಂಡ್ಯ: ತನ್ನ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಪತಿ, ಬಂಧನ ಭೀತಿಯಿಂದ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಳವಳ್ಳಿ ತಾಲ್ಲೂಕಿನ ಗೌಡಗೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸಪ್ಪ ಎಂಬಾತ ಕಳೆದ ರಾತ್ರಿ ತನ್ನ ಪತ್ನಿ ಬಸಮಣಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ. ಘಟನೆ ಸಂಬಂಧ ಮೊಮ್ಮಗ ಪೊಲೀಸರಿಗೆ ದೂರು ನೀಡುತ್ತಿದ್ದಂತೆ, ಬಸಪ್ಪ ಗ್ರಾಮದ ಹೊರ ವಲಯದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಧನದ ಭೀತಿಯಿಂದಲೇ ಬಸಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದ್ದು, ಗ್ರಾಮಾಂತರ ಪೊಲೀಸರು ಪ್ರಕರಣ ದಾಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder suicide ವಲಯ ದಾರುಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ