ಯುವಕನೊಬ್ಬನ ತಲೆ ಕತ್ತರಿಸಿ ಬರ್ಬರ ಹತ್ಯೆ!

#Political leader #Anekal #Murder

18-09-2018

ಬೆಂಗಳೂರು: ತಮಿಳುನಾಡಿನ ಯುವ ರಾಜಕೀಯ ಮುಖಂಡನ ತಲೆ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿ ಮೃತದೇಹವನ್ನು ಪೊದೆಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ದುರ್ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತದೇಹವನ್ನು ತಮಿಳುನಾಡಿನ ಹೊಸೂರಿನ ತೋರಪಲ್ಲಿಯ ರಾಜಕೀಯ ಮುಖಂಡ  ಮುನಿರಾಜು (35) ಎಂದು ಗುರುತಿಸಲಾಗಿದೆ. ಆನೇಕಲ್‍ ನ ಬೃಂದಾವನ ಗಾರ್ಡನ್ ಬಳಿಯ ಬಡಾವಣೆ ಪೊದೆಯೊಂದರಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು.

ಕಳೆದೆರಡು ದಿನಗಳಿಂದ ಮಳೆಯಾಗುತ್ತಿರುವ ಕಾರಣ ಇಲ್ಲಿನ ನಿವಾಸಿಗಳು ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಜೆಸಿಬಿ ಮೂಲಕ ಕಾಲುವೆ ಸ್ವಚ್ಛ ಮಾಡುವಾಗ ಮೃತದೇಹ ಕಂಡಕೊಡಲೇ ನಿವಾಸಿಗಳು ಆನೇಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ದೊರೆತಿರುವ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು, ಬೇರೆ ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಬೀಸಾಡಿರುವ ಶಂಕೆ ವ್ಯಕ್ತವಾಗಿದೆ. ಆನೇಕಲ್ ಪೊಲೀಸರು ಮಾಹಿತಿ ಪಡೆದಿದ್ದು, ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತದೇಹ ತಮಿಳುನಾಡಿನ ಹೊಸೂರು ಸಮೀಪದ ತೋರಪಲ್ಲಿ ಗ್ರಾಮದ ಮುನಿರಾಜು (35) ಎಂಬವರದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಶನಿವಾರದಿಂದ ಕಾಣೆಯಾಗಿರುವ ಮುನಿರಾಜುನನ್ನು ಪತ್ತೆಹಚ್ಚುವಂತೆ ಹೊಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲಿಂದ ನಾಪತ್ತೆಯಾದ ಮುನಿರಾಜ್ ಕೊಲೆಯಾಗಿ ಹೋಗಿದ್ದಾರೆ. ಹೊಸೂರಿನ ರೌಡಿ ಜೆಪಿ ಎಂಬುವವನ ಕಾರಿನ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮುನಿರಾಜು  ಇತ್ತೀಚೆಗಷ್ಟೇ ಕೆಲಸ ಬಿಟ್ಟು ರಾಜಕೀಯಕ್ಕೆ ಇಳಿದು ಕೆಲವೊಂದು ರಾಜಿ ಪಂಚಾಯಿತಿ ಹಾಗೂ ಭೂ ವ್ಯವಹಾರಗಳಲ್ಲಿ ಮುಂದೆ ಇರುತ್ತಿದ್ದ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder politicla leader ಮೃತದೇಹ ಪರೀಕ್ಷೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ