ತಹಶೀಲ್ದಾರ್ ಮೇಲೆ ಹಲ್ಲೆ!

#Kodagu  #Tahsildar #Flood

19-09-2018

ಕೊಡಗು: ಪರಿಹಾರ ಕೇಂದ್ರ ಒಂದರಲ್ಲಿ ತಹಶೀಲ್ದಾರ್ ಮೇಲೆ ಹಲ್ಲೆ ನಡೆದಿದೆ. ಕುಶಾಲನಗರದ ವಾಲ್ಮೀಕಿ ಭವನದಲ್ಲಿರುವ ಪರಿಹಾರ ಕೇಂದ್ರದಲ್ಲಿ ನಿನ್ನೆ ರಾತ್ರಿ ನೆರೆ ಸಂತ್ರಸ್ತರು ಸೋಮವಾರಪೇಟೆ ತಹಶೀಲ್ದಾರ್ ಮಹೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ಗಾಯಗಳಾಗಿದ್ದು ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪರಿಹಾರ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಸಂತ್ರಸ್ತರನ್ನು ಸಮಾಧಾನಪಡಿಸಲು ತೆರಳಿದ್ದ ತಹಶೀಲ್ದಾರ್ ಅವರ ತಲೆಗೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ರಾತೋರಾತ್ರಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಭೇಟಿ‌ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಪರಿಹಾರ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಇಲ್ಲ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಘಟನೆಯ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಎಲ್ಲಾ ವ್ಯವಸ್ಥೆ ಇದ್ದರೂ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ, ಇದರಲ್ಲಿ  ತಮ್ಮ ತಪ್ಪು ಇಲ್ಲ ಎಂದು ತಹಶೀಲ್ದಾರ್ ಮಹೇಶ್ ಪ್ರತಿಕ್ರಿಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Flood Tahsildar ಪರಿಹಾರ ಸಿಸಿಟಿವಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ