ಈ ಶಾಲೆಯ ಆವರಣವೇ ಕುಡುಕರ ಅಡ್ಡ!

#Government #Schools #Drunkers

19-09-2018

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಿರೇಜಂತಗಲ್ ಸರ್ಕಾರಿ ಶಾಲೆಯ ಅವ್ಯವಸ್ಥೆಯಿಂದ ಶಿಕ್ಷಕರು, ವಿದ್ಯಾರ್ಥಿಗಳು ಬೇಸತ್ತಿದ್ದಾರೆ. ಶಾಲೆಯ ಆವರಣ ಕುಡುಕರ ಅಡ್ಡ ಆಗಿದ್ದು, ರಾತ್ರಿಯಾದರೆ ಸಾಕು ಶಾಲೆಯಲ್ಲಿ ಕುಡುಕರ ಹಾವಳಿ ಹೆಚ್ಚಾಗುತ್ತದೆ. ಮದ್ಯ ಸೇವನೆ ಮಾಡಿ ಬಾಟಲಿಗಳನ್ನು ಅಲ್ಲೇ ಬಿಸಾಡಿ ಹೋಗುವ ಕುಡುಕರು ಶಾಲೆ ಎಂಬುದನ್ನೂ ನೋಡದೆ ಈ ರೀತಿಯ ಕೃತ್ಯಗಳನ್ನು ನಡೆಸುತ್ತಿದ್ದಾರೆ. ಪ್ರತಿನಿತ್ಯ ಶಾಲೆಯ ಆವರಣದಲ್ಲಿ ಮದ್ಯ ಸೇವನೆ ಮಾಡುತ್ತಿರುವುದರಿಂದ ಇದು ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ. ಬೆಳಿಗ್ಗೆ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮದ್ಯದ ಬಾಟಲಿಗಳು ದರ್ಶನವಾಗುತ್ತಿವೆ. ಇದರಿಂದ ಶಿಕ್ಷಕರು ರೋಸಿಹೋಗಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡಲೆ ಕ್ರಮ ಕೈಗೊಳ್ಳುವಂತೆ ಶಿಕ್ಷಕರು ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Government Schools Drunkers ಶಿಕ್ಷಕ ಪ್ರಭಾವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ