ಅಕ್ರಮವಾಗಿ ನಕ್ಷತ್ರ ಆಮೆಗಳ ಸಗಾಟ: ಇಬ್ಬರ ಬಂಧನ

20-09-2018
ಮೈಸೂರು: ನಕ್ಷತ್ರ ಅಮೆಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಹುಣಸೂರು ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪೂವಯ್ಯ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ನಾಸೀರ್ (40), ರಿಯಾಜ್ (42) ಎಂಬುವರನ್ನು ಆಮೆಗಳ ಸಮೇತ ಬಂಧಿಸಿದ್ದಾರೆ. ಬಂಧಿತರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಅಕ್ರಮವಾಗಿ ನಕ್ಷತ್ರ ಆಮೆ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಕಾರು ಮತ್ತು ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ವಿಚಾರಣೆ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ