ವಿಮಾನ ನಿಲ್ದಾಣದಲ್ಲಿ ಮೂವರು ಬಾಂಗ್ಲಾ ಪ್ರಜೆಗಳ ಅರೆಸ್ಟ್

#Bangladesh #Migrants # Air Port

20-09-2018 199

ಬೆಂಗಳೂರು: ನಕಲಿ ಪಾಸ್‍ ಪೋರ್ಟ್ ಬಳಸಿ ದುಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಕೋಡಿಪಾಳ್ಯದ ಸುಹೇಲ್ (21), ಗುರಪ್ಪನಪಾಳ್ಯದ ಅಲ್ಲಾವುದ್ದೀನ್ ಖಾಜಿ (34) ಹಾಗೂ ಅಬುಲ್ ಹಸನ್ (26) ಬಂಧಿತ ಆರೋಪಿಗಳಾಗಿದ್ದು, ಇವರಿಂದ ಪಾಸ್‍ಪಾರ್ಸ್ ಇನ್ನಿತರ ನಕಲಿ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ತಿಳಿಸಿದ್ದಾರೆ.

ಬಾಂಗ್ಲಾ ದೇಶದಿಂದ ನಗರಕ್ಕೆ ವಲಸೆ ಬಂದಿದ್ದ ಈ ಮೂವರೂ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದರು. ಸುಹೇಲ್ ಖಾಸಗಿ ಕಂಪನಿಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದರೆ, ಗುರಪ್ಪನಪಾಳ್ಯದಲ್ಲಿ ಪ್ಲಂಬರ್ ಕೆಲಸ ಮಾಡುತ್ತಿದ್ದ ಅಲ್ಲಾವುದ್ದೀನ್ ಖಾಜಿ ಹಾಗೂ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ಅಬುಲ್ ಹಸನ್, ನಕಲಿ ಪಾಸ್ ಪೋರ್ಟ್ ಮಾಡಿಕೊಂಡು ದುಬೈಗೆ ಹೋಗಲು ಯತ್ನಿಸುತ್ತಿದ್ದಾಗ ವಲಸೆ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಮೂವರನ್ನು ವಶಕ್ಕೆ ಪಡೆದುಕೊಂಡಿರುವ ವಲಸೆ ಅಧಿಕಾರಿಗಳು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bangladesh Migrants ಪಾಸ್ ಪೋರ್ಟ್ ವಿಮಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ