ಯುವತಿಯರನ್ನು ಬೆದರಿಸಿ ಸುಲಿಗೆ: ಕಳ್ಳನಿಗೆ ಧರ್ಮದೇಟು

#Public #Robbery #Attacked

20-09-2018

ಬೆಂಗಳೂರು: ಉತ್ತರ ಭಾರತ ಮೂಲದ ಯುವತಿಯರನ್ನು ಗುರಿಯಾಗಿಸಿಕೊಂಡು ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಐನಾತಿ ಕಳ್ಳನೊಬ್ಬನನ್ನು ಸಾರ್ವಜನಿಕರ ಹಿಡಿದು ಧರ್ಮದೇಟು ಕೊಟ್ಟು ಕೆಂಗೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೈಸೂರು ಸರ್ಕಲ್ ನಿವಾಸಿ ದಿನೇಶ್ ಬಂಧಿತ ಆರೋಪಿಯಾಗಿದ್ದಾನೆ. ಉತ್ತರ ಭಾರತ ಮೂಲದ ಯುವತಿಯರಿಗೆ ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯಿಂದ ನಗದು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಯುವತಿಯೊಬ್ಬನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಕೆಂಗೇರಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Public Robbery ಮೈಸೂರು ಸರ್ಕಲ್ ಸುಲಿಗೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ