ನೀರಿನ ತೊಟ್ಟಿಗೆ ಬಿದ್ದು ಮಗು ಸಾವು !

Kannada News

02-06-2017 240

ಬೆಂಗಳೂರು:- ಮನೆಯ ಬಳಿ ಆಟವಾಡುತ್ತಿದ್ದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಗರದ ಹೊರವಲಯದ ದೇವನಹಳ್ಳಿ ಬಳಿಯ ಬಿದಲೂರಿನಲ್ಲಿ ನಡೆದಿದೆ. ಗ್ರಾಮದ ನರಸಿಂಹಮೂರ್ತಿ ಎಂಬುವರ ಒಂದೂವರೆ ವರ್ಷದ ಮಗ ಮಿಥುನ್ ಸಾವನ್ನಪ್ಪಿದ್ದಾನೆ. ಮಗು ಮನೆಯ ಆವರಣದಲ್ಲಿ ಆಟವಾಡುತ್ತಿದ್ದ ಸಮಯದಲ್ಲಿ ಅಲ್ಲೆ ಇದ್ದ ನೀರಿನ ಸಂಪಿಗೆ ಬಿದ್ದು ಈ ದುರ್ಘಟನೆ ನಡೆದಿದೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ