ಶೃಂಗೇರಿಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ

#Sringeri #H.D.Kumaraswamy #chikkamagaluru

21-09-2018

ಚಿಕ್ಕಮಗಳೂರು: ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ರಾತ್ರಿ 7 ಗಂಟೆಗೆ ಶೃಂಗೇರಿಗೆ ತಲುಪಲಿರುವ ಸಿಎಂ, ಶೃಂಗೇರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಚಿಕ್ಕಮಗಳೂರು ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಿಎಂ ಜೊತೆಗೆ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಅವರು ಭಾಗಿಯಾಗಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Sringeri H.D.Kumaraswamy ವಿಶೇಷ ಕೆ.ಜೆ ಜಾರ್ಜ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ