ಡಿಜಿಪಿ ಅವರನ್ನು ಭೇಟಿ ಮಾಡಿದ ಶೋಭಾ ಕರಂದ್ಲಾಜೆ

#Shobha Karandlaje #Neelamani Raju #BJP

21-09-2018

ಬೆಂಗಳೂರು: ‘ರಾಜ್ಯದ ಜನರಿಗೆ ಬಿಜೆಪಿ ವಿರುದ್ಧ ದಂಗೆ ಏಳಲು ಕರೆ ನೀಡುತ್ತೇನೆ’ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ದಂಗೆ’ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಿದ್ದರು. ಈ ಹಿನ್ನೆಲೆ ಸಿಎಂ ಕುಮಾರಸ್ವಾಮಿ ವಿರುದ್ಧ ಶೋಭಾ ಕರಂದ್ಲಾಜೆ ಸೇರಿದ ಬಿಜೆಪಿ ತಂಡ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ರಾಜು ಅವರನ್ನು ಭೇಟಿಯಾಗಿ, ಸಿಎಂ ಕುಮಾರಸ್ವಾಮಿ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ‘ಸಿಎಂ ಕುಮಾರಸ್ವಾಮಿ ನಾಡದ್ರೋಹ ಹೇಳಿಕೆ ಕೊಟ್ಟಿದ್ದಾರೆ. ಈ ಹಿಂದೆಯೂ ಸಿಎಂ ಸ್ಥಾನಕ್ಕೆ ಅಪಮಾನ ಮಾಡಿದ್ದರು, ಸಿಎಂ ಆಗಿದ್ದುಕೊಂಡು ಈ ರೀತಿ ಹೇಳಿಕೆ ನೀಡೊದು ಸರಿಯಲ್ಲ' ಎಂದಿದ್ದಾರೆ ಶೋಭಾ ಕರಂದ್ಲಾಜೆ.


ಸಂಬಂಧಿತ ಟ್ಯಾಗ್ಗಳು

Shobha Karandlaje Neelamani Raju ಕಾನೂನು ಯಡಿಯೂರಪ್ಪ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ