ಸಿಎಂ ಕುಮಾರಸ್ವಾಮಿ ಪ್ರತಿಕೃತಿ ದಹಿಸಿ ಪ್ರತಿಭಟನೆ

#Chitradurga / Davangere #BJP Protest #H.D.Kumaraswamy

21-09-2018

ದಾವಣಗೆರೆ: ಸಿಎಂ ಕುಮಾರಸ್ವಾಮಿ ಅವರ ‘ದಂಗೆ ಹೇಳಿಕೆಗೆ ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ನಗರದ ಗಾಂಧಿ ವೃತ್ತದಲ್ಲಿ ಸಿಎಂ ಕುಮಾರಸ್ವಾಮಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗು ಸಿಎಂ ಕುಮಾರಸ್ವಾಮಿ ವಿರುದ್ಧ ಧಿಕ್ಕಾರಗಳನ್ನು ಕೂಗಿಕೊಂಡಿದ್ದಾರೆ.

ಇನ್ನು ಚಿತ್ರದುರ್ಗದಲ್ಲೂ ಕೂಡ ಸಿಎಂ ಹೇಳಿಕೆಗೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಮೊಳಕಾಲ್ಮೂರು ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಕುಮಾರಸ್ವಾಮಿ ಭಾವಚಿತ್ರಕ್ಕೆ ಚಪ್ಪಲಿ ಏಟು ಮತ್ತು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಕುಮಾರಸ್ವಾಮಿ ಸರ್ಕಾರ ತೊಲಗಲಿ ಎಂದು ಘೋಷಣೆಗಳನ್ನು ಕೂಗಿಕೊಂಡಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು. ಒಟ್ಟಾರೆ ಸಿಎಂ ಅವರ ಹೇಳಿಕೆ ಬಿಜೆಪಿ ವಲಯದಲ್ಲಿ ಕಿಚ್ಚು ಹಚ್ಚಿರುವುದಂತೂ ನಿಜ.


ಸಂಬಂಧಿತ ಟ್ಯಾಗ್ಗಳು

BJP Protest Chitradurga / Davang ಭಾವಚಿತ್ರ ‘ದಂಗೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ