ಯುವಕ ದಿಢೀರ್ ಸಾವು: ಆಸ್ಪತ್ರೆಯಲ್ಲಿ ಸಂಬಂಧಿಕರ ದಾಂಧಲೆ

#Hospital #Dengue

21-09-2018

ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಆತನ ಸಂಬಂಧಿಕರು ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಭಾಯಿಸಿದ್ದಾರೆ.

ಶಿಡ್ಲಘಟ್ಟದ ಚೊಕ್ಕೊಂಡಹಳ್ಳಿಯ ಚನ್ನಳ್ಳಿಯ ಆಕಾಶ್ (19) ಮೃತ ಯುವಕ. ಜ್ವರದಿಂದ ಬಳಲುತ್ತಿದ್ದ ಆಕಾಶ್‍ನನ್ನು ಬುಧವಾರ ದೇವನಹಳ್ಳಿ ಪಟ್ಟಣದ ಆಕಾಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗುರುವಾರ ಸಂಜೆ ಯುವಕ ದಿಢೀರ್ ಸಾವನ್ನಪ್ಪಿದ್ದಾನೆ. ಡೆಂಘಿ ಜ್ವರದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತ್ತು ಸಂಬಂಧಿಕರು ವೈದ್ಯರ ನಿರ್ಲಕ್ಷ್ಯದಿಂದಲೇ ಯುವಕ ಸಾವನ್ನಪ್ಪಿದ್ದಾನೆಂದು ಆರೋಪಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ಆಸ್ಪತ್ರೆಯ ಬಾಗಿಲಿನ ಗ್ಲಾಸ್‍ಗಳು ಪುಡಿಪುಡಿ ಮಾಡಿದ್ದಾರೆ. ಪೊಲೀಸರು ಮತ್ತು ಸಂಬಂಧಿಕರ ನಡುವೆ ಮಾತಿನ ಚಕಮಕಿ ನಡೆದ ಪರಿಣಾಮ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Hospital Dengue ಲಾಠಿ ಚಾರ್ಜ್ ದಾಂಧಲೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ