ಸಿದ್ದು ನಿವಾಸಕ್ಕೆ ಸಿಎಂ ಕುಮಾರಸ್ವಾಮಿ ದಿಢೀರ್ ಭೇಟಿ

#Siddaramaiah #D.K.Shivakumar #G.Parameshwara

21-09-2018

ಬೆಂಗಳೂರು: ಗರಿಗೆದರಿರುವ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದು ದಿಢೀರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಆಪರೇಷನ್ ಕಮಲ ಭೀತಿ, ದಂಗೆ ಹೇಳಿಕೆಗಳ ಬಳಿಕ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ್ದು, ವಿಶೇಷವಾಗಿತ್ತು. ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ  ಈಶ್ವರ್ ಖಂಡ್ರೆ ಅವರು ಪಾಲ್ಗೊಂಡಿದ್ದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆದಿದ್ದು, ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ಹೆಣೆಯುವುದರ ಮೂಲಕ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲೂ  ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಅಸಮಾಧಾನ: ಜಾರಕಿಹೊಳಿ ಸಹೋದರರ ವಿಷಯ, ದಂಗೆ ಏಳುವ ಹೇಳಿಕೆ ಕುರಿತು ಸಿದ್ದರಾಮಯ್ಯ ಅವರು ಸಿಎಂ ಎಚ್ಡಿಕೆ ಬಳಿ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಗೊತ್ತಾಗಿದೆ. ಒಟ್ಟಾರೆ, ಬಿಜೆಪಿಯ ಆಪರೇಷನ್ ಕಮಲಕ್ಕೆ ಯಾವ ರೀತಿ ಬ್ರೇಕ್ ಹಾಕಬೇಕು. ಸರ್ಕಾರವನ್ನು ಸುಸೂತ್ರವಾಗಿ ನಡೆಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Siddaramaiah Kumaraswamy ತಂತ್ರ ನಿವಾಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ