ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಕಾರ್ಯಕರ್ತರ ಆಗ್ರಹ

#President

21-09-2018

ಚಾಮರಾಜನಗರ: ‘ರಾಜ್ಯದ ಜನರನ್ನ ದಂಗೆ ಏಳಿಸುತ್ತೇನೆ' ಎನ್ನುವ ಸಿಎಂ ಹೇಳಿಕೆ ಖಂಡಿಸಿ ಚಾಮರಾಜನಗರದಲ್ಲಿ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಿಂದ ಶ್ರೀ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪ್ರತಿಭಟನೆ ವೇಳೆ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದಾರೆ. 'ಸಮ್ಮಿಶ್ರ ಸರ್ಕಾರ ರೌಡಿಸಂ ಸರ್ಕಾರ' ಎಂದು ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. 'ಸಿಎಂ ಕುಮಾರಸ್ವಾಮಿ ನಾಲಿಗೆ ಹಿಡಿತದಲ್ಲಿ ಮಾತನಾಡುವುದನ್ನು ಕಲಿಯಲಿ', ಕೆಲವೇ ದಿನಗಳಲ್ಲಿ ರಾಜ್ಯದ ಜನರೇ ಇವರಿಗೆ ಬುದ್ಧಿ ಕಲಿಸಲಿದ್ದಾರೆ ಎಂದರು. ಇದೇ ವೇಳೆ ಸಿಎಂ ಹೇಳಿಕೆ ಖಂಡಿಸಿ ಮುಖ್ಯಮಂತ್ರಿ ಹೆಚ್ಡಿಕೆ ರಾಜೀನಾಮೆಗೂ ಆಗ್ರಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

President's Rule Chamarajanagar ರೌಡಿಸಂ ಮೆರವಣಿಗೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ