ಮಹಿಳೆ ಮೇಲೆ ಹಲ್ಲೆ: ಘಟನೆ ಖಂಡಿಸಿ ಪ್ರತಿಭಟನೆ

#Mandya #Slave #Dalit women

22-09-2018

ಮಂಡ್ಯ: ಮದ್ದೂರಿನ ದಲಿತ ಮಹಿಳೆಯೊಬ್ಬರನ್ನು ಜೀತಕ್ಕಾಗಿ ಎಳೆದೊಯ್ದ ಘಟನೆ ಖಂಡಿಸಿ, ಮಂಡ್ಯದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಎಸ್ಪಿ ಕಚೇರಿವರೆಗೂ ಪ್ರತಿಭಟನಾ ಜಾಥಾ ನಡೆಸಿ ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ನಡೆಸಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತಂತೆ ಸೂಕ್ತ ಕ್ರಮ ಜರುಗಿಸುವಂತೆ ಎಸ್.ಪಿ ಮತ್ತು ಡಿಸಿಗೆ ದೂರು ಸಲ್ಲಿದ್ದಾರೆ. ಜಿಲ್ಲೆಯಲ್ಲಿ ಜೀತ ಪದ್ದತಿ ನಿರ್ಮೂಲನೆ ಮಾಡುವಂತೆ ಜಿಲ್ಲಾಡಳಿತಕ್ಕೆ ಈ ಮೂಲಕ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Mandya Slave ದಲಿತ ಕಾರ್ಯಕರ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ