ಕಿಡಿಕೇಡಿಗಳ ಕೃತ್ಯ: ವಾಲ್ಮೀಕಿ ಮೂರ್ತಿ ಭಗ್ನ

#Valmiki  #Statue  #Gangavati

22-09-2018

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಕಿಡಿಗೇಡಿಗಳು ಮಹರ್ಷಿ ವಾಲ್ಮೀಕಿಯವರ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ. ಕಲ್ಲಿನಿಂದ ಮೂರ್ತಿಯನ್ನು ವಿರೂಪಗೊಳಿಸಲಾಗಿದ್ದು, ಘಟನೆ ಖಂಡಿಸಿ ವಾಲ್ಮೀಕಿ ಸಮುದಾಯದವರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದ ನೂರಾರು ಜನರು ಗಂಗಾವತಿ-ತಾವರಗೇರಾ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಕನಕಗಿರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  ಘಟನೆಯಿಂದ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಗ್ರಾಮದ ಮೇಲೆ ಕಣ್ಣಿಟ್ಟಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Valmiki Statue ಸಮುದಾಯ ಗಂಗಾವತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ