ಯಲಹಂಕದಲ್ಲಿ ವ್ಯಕ್ತಿಯೊಬ್ಬರ ಭೀಕರ ಕೊಲೆ

#Local Leader #Murder #Congress

24-09-2018

ಯಲಹಂಕ: ನಿನ್ನೆ ತಡರಾತ್ರಿ ಯಲಹಂಕದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಲಾಂಗು ಮಚ್ಚುಗಳಿಂದ ಯಲಹಂಕದ ಸ್ಥಳೀಯ ಕಾಂಗ್ರೆಸ್ ಮುಖಂಡನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಅಳ್ಳಾಳಸಂದ್ರದ ನಿವಾಸಿಯಾಗಿರುವ ಅರುಣ್ ಕುಮಾರ್ ಅಲಿಯಾಸ್ ಕ್ಯಾಟ್ ಅರುಣ್ ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈದಿದ್ದಾರೆ. ಅರುಣ್ ಕುಮಾರ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಎನ್ನಲಾಗಿದೆ. ನಿನ್ನೆ ತಡರಾತ್ರಿ 2:30ರ ವೇಳೆಯಲ್ಲಿ ಅರುಣ್ ಗೆ  ಕರೆ ಮಾಡಿ ಮನೆಯಿಂದ ಹೊರಗೆ ಕರೆಸಿಕೊಂಡು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಯಲಹಂಕ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder Local Leader ನಿವಾಸಿ ಮಾರಕಾಸ್ತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ