ಮೆರವಣಿಗೆ ವೇಳೆ ಕಲ್ಲು ತೂರಾಟ: ಹಲವರಿಗೆ ಗಾಯ

#Kalaburagi  #Ganesh Procession #Police

24-09-2018

ಕಲಬುರಗಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಉದ್ವಿಗ್ನ ಪರಿಸ್ಥಿತಿ ಉಂಟುಮಾಡಿದ್ದಾರೆ. ಜಿಲ್ಲೆಯ ಕಾಳಗಿ ಪಟ್ಟಣದಲ್ಲಿ 11ನೇ ದಿನದ ಗಣೇಶ ವಿಸರ್ಜನೆ ವೇಳೆ ಈ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಪಟ್ಟಣದ ಮಸೀದಿಯೊಂದರ ಮುಂದೆ ಮೆರವಣಿಗೆ ಹಾದು ಹೋಗುತ್ತಿದ್ದ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಎಚ್ಚೆತ್ತ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

kalaburagi Ganesh Procession ಪರಿಸ್ಥಿತಿ ಮೆರವಣಿಗೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ