ಹೃದಯಾಘಾತ: ಬಸ್ಸಲ್ಲೇ ಕಂಡಕ್ಟರ್ ನಿಧನ

#Bus Conductor #Puttarangashetty #

24-09-2018

ಚಾಮರಾಜನಗರ: ಕರ್ತವ್ಯಕ್ಕೆ ಸಜ್ಜಾಗುತ್ತಿದ್ದ ವೇಳೆ ಕಂಡಕ್ಟರ್ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ, ಚಾಮರಾಜನಗರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಿಜಾಪುರ ಮೂಲದ ಗೋಪಾಲ್ ರಾಥೋಡ್ (36) ಮೃತ ಕಂಡಕ್ಟರ್ ಎಂದು ಗುರುತಿಸಲಾಗಿದೆ.

ಗೋಪಾಲ್ ರಾಥೋಡ್ ಪ್ರೊಬೆಷನರಿ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬೆಳಗ್ಗಿನ ಟ್ರಿಪ್ ಗೆ ರೆಡಿಯಾಗುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಬಸ್ಸಿನಲ್ಲೆ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಸದ್ಯ ಮೃತದೇಹವನ್ನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ