ದರ್ಶನ್ ಕಾರು ಅಪಘಾತ: ಆಸ್ಪತ್ರೆಗೆ ನಟ ಕೀರ್ತಿ ರಾಜ್ ಭೇಟಿ

#Challenging Star  #Actor Keerthi Raj # Accident #Mysore

24-09-2018

ಮೈಸೂರು: ನಟ ದರ್ಶನ್ ಅವರ ಆರೋಗ್ಯ ಚೆನ್ನಾಗಿದೆ ಎಂದು ಹಿರಿಯ ನಟ ಕೀರ್ತಿ ರಾಜ್ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ದರ್ಶನ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಬಳಿ ಮಾತನಾಡಿದ ಅವರು, 'ನಟ ದರ್ಶನ್ ಅವರ ಬಲಗೈಗೆ ಶಸ್ತ್ರ ಚಿಕಿತ್ಸೆ ನಡೆದಿದೆ. ಹಿರಿಯ ನಟ ದೇವರಾಜ್ ಗೆ ಬೆರಳಿಗೆ ಗಾಯವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್ಲರು ಉತ್ತಮ ಸ್ಥಿತಿಯಲ್ಲಿದ್ದಾರೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರ ಮೇಲಿದೆ. ಸದ್ಯ ಕಂಟಕ ಕಳೆದಿದೆ ಎಂದು ಭಾವಿಸೋಣ' ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ