‘ಮಳೆ ನೀರೊಂದಿಗೆ ಹಾವು-ಚೇಳುಗಳು ಬರುತ್ತಿವೆ’

#Mandya  #creatures  #Snake

24-09-2018

ಮಂಡ್ಯ: ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ತಾಲ್ಲೂಕಿನ ಹೊಳಲು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ಗ್ರಾಮದ ಹೆಚ್.ಡಿ.ಚೌಡಯ್ಯ ಬಡಾವಣೆಗೆ ಕೆರೆಯ ನೀರು ನುಗ್ಗಿದ್ದು ಇಲ್ಲಿನ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮಳೆ ಬಂತೆಂದರೆ ಸಾಕು ಸಮೀಪದ ಕೆರೆಯ ನೀರು ಗ್ರಾಮಕ್ಕೆ ನುಗ್ಗುತ್ತದೆ. ನೀರಿನ ಜೊತೆ ಹಾವು, ಚೇಳು ಸೇರಿದಂತೆ ಹಲವು ವಿಷಕಾರಿ ಪ್ರಾಣಿಗಳು ಮನೆಗೆ ಬರುತ್ತಿದ್ದು, ಆತಂಕದಿಂದ ಜೀವನ ಸಾಗಿಸಬೇಕಾಗಿದೆ ಎಂದು ಸ್ಥಳೀಯರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಬಡಾವಣೆ ನಿರ್ಮಾಣ ಮಾಡಿದ ಕಾಲದಿಂದಲೂ ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳು ಸಂಕಷ್ಟ ಎದುರಿಸಬೇಕಾಗಿದೆ. ಆದರೆ, ಅಧಿಕಾರಿಗಳು ಮಾತ್ರ ಸಮಸ್ಯೆ ನಿವಾರಣೆಗೆ ಮುಂದಾಗಿಲ್ಲ. ಇನ್ನಾದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನ ಹರಿಸಬೇಕಾಗಿದೆ. ಜೊತೆಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಡಬೇಕಾಗಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Mandya Rain ನಿವಾರಣೆ ಸಂಕಷ್ಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ