ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ !

Kannada News

03-06-2017

ಶ್ರೀನಗರ್:- ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ, ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಕಾಶ್ಮೀರದ ಪೂಂಚ್ ಗಡಿಯಲ್ಲಿ ಪ್ರಚೋದಿತ ದಾಳಿ ನಡೆಸಿದ್ದಾರೆ. ಶುಕ್ರವಾರ ರಾತ್ರಿ ಲೈನ್ ಆಫ್ ಕಂಟ್ರೋಲ್ ಬಳಿ ಪಾಕಿಸ್ತಾನಿ ಸೈನಿಕರು ದಾಳಿ ನಡೆಸಿದ್ದಾರೆ. ಇದಕ್ಕೆ ಭಾರತೀಯ ಸೈನಿಕರು ತಕ್ಕ ಪ್ರತಿ ದಾಳಿ ನಡೆಸಿದ್ದಾರೆ. ರಾತ್ರಿ ನಡೆದ ಪೂಂಚ್ ದಾಳಿಯಲ್ಲಿ ಬಿ.ಎಸ್.ಎಫ್ ನ ಯೋಧರೊಬ್ಬರು ಗಾಯಗೊಂಡಿದ್ದಾರೆ. ಪೂಂಚ್ ಬಳಿಯಿರುವ ಶಾಹಪುರ್, ಕೆರ್ನಿ, ಬಳಿ ಪಾಕಿಸ್ತಾನಿ ಸೈನಿಕರು ದಾಳಿ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಜಮ್ಮು ಕಾಶ್ಮೀರದ ಬಳಿ ಪಾಕಿಸ್ತಾನಿ  ಸೈನಿಕರಿಂದ ಪ್ರಚೋದಿತ ದಾಳಿ ನಡೆಸುತ್ತಿದ್ದು, ಇದೀಗ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಭಾರತದ ಸೈನಿಕರ ಸರ್ಜಿಕಲ್ ದಾಳಿ ನಡೆಸಿದ ಬಳಿಕ ಭಾರತ - ಪಾಕಿಸ್ತಾನ  ಗಡಿ ಪ್ರದೇಶಗಳಲ್ಲಿ ಹೆಚ್ಚು ಕಟ್ಟೆಚ್ಚರವ ವಹಿಸಿಲಾಗಿದೆ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ