ಡಿಸಿಎಂ ಪರಮೇಶ್ವರ್-ಸಚಿವ ರಮೇಶ್ ಜಾರಕಿಹೊಳಿ ಭೇಟಿ!

#G.Parameshwara #Ramesh Jarkiholi #Legislative party

25-09-2018

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೂ ಮುನ್ನ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರನ್ನು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸದಾಶಿವನಗರದಲ್ಲಿ ಭೇಟಿ ಮಾಡಿದ್ದಾರೆ. ಉಭಯ ನಾಯಕರ ಮಧ್ಯೆ ಸತತ ಒಂದು ಗಂಟೆಗಳ ಕಾಲ‌ ನಡೆದ ಮಾತುಕತೆಯಲ್ಲಿ ಸಚಿವ ಜಾರಕಿಹೊಳಿ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಶಾಸಕರಿಗೆ ಸಚಿವ ಸ್ಥಾನ ವಿಚಾರ, ನಿಗಮ ಮಂಡಳಿಗಳಿಗೆ ಅಧ್ಯಕ್ಷ ಸ್ಥಾನ ವಿಚಾರ, ಬೆಳಗಾವಿ ಉಸ್ತುವಾರಿ ಬದಲಾವಣೆ ವಿಚಾರಗಳ ಕುರಿತು ಶಾಸಕಾಂಗ ಸಭೆಯಲ್ಲಿ ಈ ಬೇಡಿಕೆಗಳನ್ನು ಈಡೇರಿಸಬೇಕೆಂಬದನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಈ ಚರ್ಚೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ  ಜಮೀರ್ ಅಹಮದ್ ಭಾಗಿಯಾಗಿದ್ದರು.


ಸಂಬಂಧಿತ ಟ್ಯಾಗ್ಗಳು

G. Parameshwara Ramesh Jarkiholi ಪ್ರಸ್ತಾಪ ಮಾತುಕತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ