ಬಳ್ಳಾರಿ ಭಾಗಕ್ಕೆ ಒಂದು ಸಚಿವ ಸ್ಥಾನ ಕೊಡಬೇಕು: ಪರಮೇಶ್ವರ್ ನಾಯಕ್

#P.T.Parameshwar Naik  #G.Parameshwara

25-09-2018

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ‌ವಿಚಾರವಾಗಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಭೇಟಿ ಬಳಿಕ ಮಾತನಾಡಿದ ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯಕ್, ‘ಸಾಮಾಜಿಕ ನ್ಯಾಯದಡಿ ಸಚಿವ ಸ್ಥಾನ ಕೊಡಲಿ’ ಎಂದು ಆಗ್ರಹಿಸಿದ್ದಾರೆ. ಬಳ್ಳಾರಿಯಲ್ಲಿ ಯಾರಿಗೆ ಸಚಿವ ಸ್ಥಾನ ಕೊಡಬೇಕು ಎಂಬುದನ್ನು ‌ಹೈ ಕಮಾಂಡ್ ‌ತೀರ್ಮಾನಿಸಲಿದೆ. ಅಂತಿಮವಾಗಿ ಹೈ ಕಮಾಂಡ್ ಏನು ನಿರ್ಧಾರ ಮಾಡುತ್ತದೋ ಅದನ್ನು ‌ತಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ. ಬಳ್ಳಾರಿಯಲ್ಲಿ 6 ಜನ ಶಾಸಕರಿದ್ದಾರೆ, ಹೀಗಾಗಿ ಬಳ್ಳಾರಿಗೆ ಒಂದು ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ