‘ಶಾಸಕರಲ್ಲಿ ಯಾವ ಅಸಮಾಧಾನವೂ ಇಲ್ಲ’

#H.D.Revanna #D.K.Shivakumar #

25-09-2018

ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಹೆಚ್.ಡಿ.ರೇವಣ್ಣ ಅವರು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ‘ಇದು ಕರ್ಟಸಿ ವಿಸಿಟ್ ಅಷ್ಟೇ, ರಾಜಕೀಯ ಎಲ್ಲ ಸಿಎಂ ಕುಮಾರಸ್ವಾಮಿ ನೋಡಿಕೊಳ್ಳುತ್ತಾರೆ. ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆದ ಬಳಿಕ ಡಿಕೆಶಿ ಅವರನ್ನು ಭೇಟಿ ಮಾಡಿರಲಿಲ್ಲ ಹೀಗಾಗಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ’ಎಂದರು.

ಕಾಂಗ್ರೆಸ್ ಅತೃಪ್ತ ಶಾಸಕರು ಸಿಎಂ ನಡೆಗೆ ಅಸಮಾಧಾನ ಹೊಂದಿದ್ದಾರೆ ಎನ್ನಲಾದ ವಿಚಾರವಾಗಿ ಪ್ರತಿಕ್ರಿಯಿಸಿದ ರೇವಣ್ಣ, ‘ಶಾಸಕರಲ್ಲಿ ಯಾವ ಅಸಮಾಧಾನವೂ ಇಲ್ಲ, ಎಲ್ಲ ನಡೆಯುತ್ತೆ ಬಿಡಿ' ಎಂದು ತಮ್ಮ ಎಂದಿನ ಧಾಟಿಯಲ್ಲಿ ಉತ್ತರಿಸಿದ್ದಾರೆ. 'ವಿಧಾನ ಪರಿಷತ್ ಗೆ ರಮೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು, ಅದು ಪಕ್ಷದ ನಿರ್ಧಾರ. ಮಧು ಬಂಗಾರಪ್ಪರನ್ನು ಅಭ್ಯರ್ಥಿ ಮಾಡಬೇಕು ಅಂತ ನಿರ್ಧಾರವಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ರಮೇಶ್ ಗೌಡರನ್ನು ಕಣಕ್ಕೆ ಇಳಿಸಿದ್ದೇವೆ' ಎಂದು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ