ಗಾಂಧಿ ಸೇವಾ ಪ್ರಶಸ್ತಿ-2018: ಹೆಗ್ಗೋಡು ಪ್ರಸನ್ನ ಆಯ್ಕೆ

#Mahatma Gandhi #Award #Supreme Court

25-09-2018

ಬೆಂಗಳೂರು: 2018ನೇ ಸಾಲಿನ ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಗೆ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು ಆಯ್ಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ವಿಷಯ ಪ್ರಕಟಿಸಿದರು. ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ಹುಣಸವಾಡಿ ರಾಜನ್, ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ವೂಡೆ.ಪಿ. ಕೃಷ್ಣ ಈ ಸಮಿತಿಯ ಸದಸ್ಯರಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಸದಸ್ಯ ಕಾರ್ಯದರ್ಶಿಗಳಾಗಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೀಡಲಾಗುವ ಈ ಪ್ರಶಸ್ತಿ 5 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದ್ದು, ಗಾಂಧೀ ಜಯಂತಿ ದಿನದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ವರೆಗೆ ಈ ಪ್ರಶಸ್ತಿಗೆ ಹಿರಿಯ ಗಾಂಧೀವಾದಿಗಳಾದ ಎಸ್.ಎನ್.ಸುಬ್ಬರಾವ್, ಹೋ.ಶ್ರೀನಿವಾಸಯ್ಯ, ಚನ್ನಮ್ಮ ಹಳ್ಳಿಕೇರಿ ಹಾಗೂ ಹೆಚ್.ಎಸ್. ದೊರೆಸ್ವಾಮಿ ಅವರು ಆಯ್ಕೆಯಾಗಿದ್ದರು.


ಸಂಬಂಧಿತ ಟ್ಯಾಗ್ಗಳು

Award Supreme Court ಸಾರ್ವಜನಿಕ ನಿರ್ದೇಶಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ