ಅತೃಪ್ತ ಶಾಸಕರಿಂದಲೇ ಮೈತ್ರಿ ಸರ್ಕಾರ ಪತನ: ಸಿ.ಟಿ.ರವಿ

#C.T.Ravi #BJP #Lok Sabha

25-09-2018

ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರವನ್ನು ಉರುಳಿಸುವುದಿಲ್ಲ. ಅತೃಪ್ತಿಗೊಂಡಿರುವ ಶಾಸಕರಿಂದಲೇ ಮೈತ್ರಿ ಸರ್ಕಾರ ಪತನವಾಗಲಿದೆ. ಈಗಾಗಲೇ ಸಚಿವ ಆಕಾಂಕ್ಷಿಗಳು ಭಿನ್ನಮತಕ್ಕೆ ಎಡೆ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ದೇವನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಲೋಕಸಭಾ ಚುನಾವಣೆಗೆ ಪಕ್ಷ ತಯಾರಿ ನಡೆಸುತ್ತಿದ್ದು,  ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಪಕ್ಷಕ್ಕೆ ಹಾನಿಯಾಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

C.T.Ravi Lok Sabha ವಿಶ್ವಾಸ ಲೋಕಸಭಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ