ನಟ ದರ್ಶನ್ ರ ಆರೋಗ್ಯ ವಿಚಾರಿಸಿದ ಸಚಿವ ಜಿಟಿಡಿ

#G.T.Devegowda #Darshan  #Accident

25-09-2018 248

ಮೈಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರನಟ ದರ್ಶನ್ ಅವರನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು. ದರ್ಶನ್ ನ ಬಲಗೈಗೆ ಬಲವಾಗಿ ಪೆಟ್ಟುಬಿದ್ದಿದ್ದು, ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಗಾಯಗೊಂಡಿದ್ದ ನಟ ದೇವರಾಜ್ ಮತ್ತು ಅವರ ಪುತ್ರ ಪ್ರಜ್ವಲ್ ದೇವರಾಜ್ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಇಂದು ಬಿಡುಗಡೆಯಾದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ