ಆರ್.ಅಶೋಕ್ ಮನವಿ ತಿರಸ್ಕರಿಸಿದ ಹೈಕೋರ್ಟ್

#R.Ashok #High Court #FIR

25-09-2018

ಬೆಂಗಳೂರು: ಬೆಂಗಳೂರು ಹೊರವಲಯದ ಸೋಮನಹಳ್ಳಿಯ ಸುಮಾರು 8 ಎಕರೆ ಬಗರ್ ಹುಕುಂ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸಲ್ಲಿಸಿದ್ದ ಎಫ್‍ಐಆರ್ ತಿರಸ್ಕರಿಸುವಂತೆ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್.ಅಶೋಕ್ ಮಾಡಿದ್ದ ಮನವಿಯನ್ನು ರಾಜ್ಯ ಹೈಕೋರ್ಟ್ ತಳ್ಳಿ ಹಾಕಿದೆ.

ಪ್ರಕರಣ ತನಿಖೆಗೆ ಅರ್ಹವಾಗಿದ್ದು, ಈ ಮುಂಚೆ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಹೀಗಾಗಿ ಪ್ರಕರಣದಲ್ಲಿ ಎಸಿಬಿ, ಎಫ್‍ಐಆರ್ ಸಲ್ಲಿಸಬಹುದಾಗಿದೆ ಎಂದು ನ್ಯಾಯಮೂರ್ತಿ ಬೂದಿಹಾಳ್ ಆದೇಶದಲ್ಲಿ ತಿಳಿಸಿದ್ದಾರೆ. ಆರ್.ಅಶೋಕ್ ಅವರು ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭೂಪರಿವರ್ತನಾ ಸಮಿತಿಯ ಅಧ್ಯಕ್ಷರೂ ಆಗಿದ್ದರು.


ಸಂಬಂಧಿತ ಟ್ಯಾಗ್ಗಳು

R.Ashoka FIR ತನಿಖೆ ಹೈಕೋರ್ಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ