ಸಭಾಪತಿ ಸ್ಥಾನವನ್ನು ಕಾಂಗ್ರೆಸ್‌ ದುರುಪಯೋಗ ಮಾಡಿಕೊಳ್ಳುತ್ತಿದೆ !

Kannada News

03-06-2017

ರಾಯಚೂರು:- ಯಾವ ಸಮಯದಲ್ಲಿ  ಚುನಾವಣೆ ಎದುರಾದರೂ ಬಿಜೆಪಿ ರೆಡಿ ಎಂದು ವಿಧಾನ ಪರಿಷತ್‍ನ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಕೇಂದ್ರ ಸರ್ಕಾರ ದಿಂದ ಬರ ನಿರ್ವಹಣೆಗೆ ಜನವರಿಯಲ್ಲಿ ಬಿಡುಗಡೆಯಾದ 700 ಕೋಟಿ ರಾಜ್ಯ ಸರ್ಕಾರದಿಂದ ಆಯಾ ಜಿಲ್ಲಾಧಿಕಾರಿ ಖಾತೆ ಜಮಾವಣೆಗೊಂಡಿಲ್ಲ ಎಂದು ದೂರಿದರು. ಮಳೆಗಾಗಿ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹೋಮ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ. ರಾಜ್ಯ ಸರ್ಕಾರ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲವನ್ನು ತುರ್ತಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಸಭಾಪತಿ ಡಿ.ಹೆಚ್.ಶಂಕರಮೂರ್ತಿ ನೋಟಿಸ್ ಜಾರಿ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಜಾತಿಗೊಂದು ಸ್ಥಾನಮಾನ ನೀಡಿದೆ. ಸಭಾಪತಿ ಸ್ಥಾನವನ್ನು ಕಾಂಗ್ರೆಸ್‌ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದರು. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಾಜ್ಯದಲ್ಲಿ ಪ್ರಬಲವಾಗಿ ಬೆಳೆದಿದೆ, ಬ್ರಿಗೇಡ್‌ನಿಂದ ಗೊಂದಲ ಸೃಷ್ಟಿಯಾಗುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ‌ ಸೂಚನೆ‌ ಮೇರಗೆ ಬ್ರಿಗೇಡ್‌ನಲ್ಲಿ ಭಾಗವಹಿಸಿಲ್ಲ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ