ಕನ್ನಡ ವಿರೋಧಿ ವಿಲನ್!

Kannada anti villain!

16-11-2018 307

`ದಿ-ವಿಲನ್' ಚಿತ್ರದಲ್ಲಿನ ಕನ್ನಡ ಭಾವುಟಕ್ಕೆ ಅಪಮಾನ ಮಾಡಿರುವ ದೃಶ್ಯ ವಿರೋಧಿಸಿ ನಿರ್ದೇಶಕ ಪ್ರೇಮ್ ಹಾಗೂ ಕಿಚ್ಚ ಸುದೀಪ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಲಾಗಿದೆ

ದಿ- ವಿಲನ್ ಚಿತ್ರದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಾರೆ ಎಂದು ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಎಂಬವರು ಪ್ರೇಮ್ ಹಾಗೂ ಸುದೀಪ್ ವಿರುದ್ಧ  ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿ ದೃಶ್ಯವನ್ನು ತೆಗೆದು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ದಿ-ವಿಲನ್ ಸಿನಿಮಾದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಕಿಚ್ಚ ಸುದೀಪ್ ತಮ್ಮ ಸೊಂಟಕ್ಕೆ ಕನ್ನಡದ ಬಾವುಟ ಸುತ್ತಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ಅವರ ವಿರುದ್ಧ ದೂರು ದಾಖಲಾಗಿದೆ. ಸದ್ಯ ಪ್ರೇಮ್ ಹಾಗು ಸುದೀಪ್ ಕ್ಷಮೆ ಕೇಳಬೇಕು, ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು ಸಂಘಟನೆ ತಿಳಿಸಿದೆ.ಸಿ.ಆರ್ ಮನೋಹರ್ ನಿರ್ಮಾಣದ ಪ್ರೇಮ್ ನಿರ್ದೇಶನದ ಶಿವರಾಜ್ ಕುಮಾರ್, ಸುದೀಪ್ ಅಭಿನಯದ ದಿ ವಿಲನ್ ಚಿತ್ರ ಅಕ್ಟೋಬರ್ 18 ರಂದು ಬಿಡುಗಡೆಯಾಗಿತ್ತು.


ಸಂಬಂಧಿತ ಟ್ಯಾಗ್ಗಳು

`ದಿ-ವಿಲನ್' ಕನ್ನಡ Kitcha Sudeep Nagesh


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ